ಲೋಪಮುದ್ರ ಆಸ್ಪತ್ರೆಯಲ್ಲಿ ಕೋವಿಡ್ ಆರೈಕೆ ಕೇಂದ್ರ ತೆರಯಲು ಅನುಮತಿ
************
ಮಡಿಕೇರಿ : ಕೋವಿಡ್ 19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರೋಗಿಗಳಿಗೆ ನೆರವಾಗಲು ಮತ್ತು ಸರ್ಕಾರದ ಜೊತೆ ಕೈಜೋಡಿಸಲು ಸಾರ್ವಜನಿಕರ ಅನುಕೂಲಕ್ಕಾಗಿ ಗೋಣಿಕೊಪ್ಪದ ಲೋಪಮುದ್ರ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮಥ್ರ್ಯದ ಕೋವಿಡ್ ಕೇರ್ ಸೆಂಟರ್ ತೆರೆಯಲು ಷರತ್ತುಬದ್ಧ ಅನುಮತಿಯನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನೀಡಿದ್ದಾರೆ.
ಷರತ್ತು ಇಂತಿವೆ: ಈಗಾಗಲೇ ಮೌಖಿಕವಾಗಿ ತಿಳಿಸಿರುವಂತೆ ಲೋಪಮುದ್ರ ಮತ್ತು ಕಾರುಣ್ಯ ಟ್ರಸ್ಟ್ ನಡುವೆ ಕರಾರು ಒಪ್ಪಂದ ಮಾಡಿಕೊಳ್ಳುವುದು. ಲೋಪಮುದ್ರ ನಿಗಧಿತ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಂದ ಯಾವುದೇ ಶುಲ್ಕ ಪಡೆಯುವಂತಿಲ್ಲ. ಈ ಕೇಂದ್ರದಲ್ಲಿ ದಾಖಲಾಗುವ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಸರ್ಕಾರದ ವತಿಯಿಂದ ಔಷಧಿಯನ್ನು ಉಚಿತವಾಗಿ ನೀಡಲಾಗುವುದು. ಮಾನವ ಸಂಪನ್ಮೂಲ ವೆಚ್ಚ ಸೇರಿದಂತೆ ಇನ್ನೂಳಿದ ಇತರೆ ಎಲ್ಲಾ ವೆಚ್ಚಗಳನ್ನು ಸಂಬಂಧಪಟ್ಟ ಟ್ರಸ್ಟ್‍ನವರೇ ಭರಿಸಬೇಕು. ಈ ಕೇಂದ್ರದಲ್ಲಿ ದಾಖಲಾಗುವ ಸೋಂಕಿತರ ಸಂಪೂರ್ಣ ಜವಬ್ದಾರಿಯನ್ನು ಟ್ರಸ್ಟ್‍ನವರೇ ವಹಿಸಿಕೊಳ್ಳತಕ್ಕದ್ದು ಎಂದು ತಿಳಿಸಲಾಗಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರಾದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಢಾಧಿಕಾರಿ ಚಾರುಲತಾ ಸೋಮಲ್ ಅವರು ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಕಾಯ್ದೆ 200, ದಿ ಎಪಿಡಮಿಕ್ ಡಿಸಿಸೀಸ್ ಕಾಯ್ದೆ 2020 ರಡಿ ಪ್ರದತ್ತವಾದ ಅಧಿಕಾರದನ್ವಯ ಅನುಮತಿ ನೀಡಲಾಗಿದೆ.
An appreciation letter to Karuna Trust from the family of 94 year old Covid patient who is discharged today from DCHC, Gonikoppa.